ಬೆಂಗಳೂರು : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಬೆಳಗಾವಿ ದಿನಪತ್ರಿಕೆ ವಿತರಕರ ಸಂಘದ ಸಹಯೋಗದಲ್ಲಿ ನವೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ 6ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನದ ಪೂರ್ವಭಾವಿ ಸಭೆಯು ಇಂದು ಬೆಂಗಳೂರಿನಲ್ಲಿ ಯಶಸ್ವಿಯಾಗಿ ಜರುಗಿತು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಕೆ. ಶಂಭುಲಿಂಗ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಭೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ 6ನೇ ರಾಜ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಬೆಳಗಾವಿಯ ಹಿರಿಯ ಪತ್ರಿಕಾ ವಿತರಕರಾದ ಶ್ರೀ ಪ್ರತಾಪ್ ಭೋಸಲೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಸಮ್ಮೇಳನಾಧ್ಯಕ್ಷರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ 6ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನದ ಹಲವಾರು ಮುಖ್ಯ ವಿಷಯಗಳ ಬಗ್ಗೆ ಕೂಲಂಕುಶವಾಗಿ ಚರ್ಚೆ ಮಾಡಲಾಯಿತು.

ಸಭೆಯಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್, ಬೆಂಗಳೂರು ವಿಜಯನಗರ ಅಧ್ಯಕ್ಷರಾದ ಗೋಪಾಲ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ್ ರಾಜಗೋಳಕರ, ಉಪಾಧ್ಯಕ್ಷರಾದ ಶ್ರೀಕಾಂತ್ ನೇವಗಿ, ಕಾರ್ಯದರ್ಶಿಗಳಾದ ಸತೀಶ್ ನಾಯ್ಕ, ರಾಜಶೇಖರ್ ಜಮಖಂಡಿ ಹಾಗೂ ಯಾಸಿನ್ ಕಿತ್ತೂರ್ ಸೇರಿದಂತೆ ಹಲವು ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.