ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಳಗಾವಿಗೆ ಆಗಮಿಸುತ್ತಿದ್ದು ಭದ್ರತೆ ದೃಷ್ಟಿಯಿಂದ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗೆ ಆಗಮಿಸಿ ಬಿರೇಶ್ವರ ಕೋ. ಆಪರೇಟಿವ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿ ಉದ್ಘಾಟನೆ ಮಾಡಲಿದ್ದಾರೆ.

ಇದಕ್ಕೂ ಮೊದಲು ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ನಲ್ಲಿ ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, 1200 ಹಾಸಿಗೆಯುಳ್ಳ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ‌ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.