ನವದೆಹಲಿ : ಧರ್ಮಸ್ಥಳದಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಶಾಲಾ ಬಾಲಕಿ ಸೌಜನ್ಯ (Sowjanya) ಹತ್ಯೆ ಪ್ರಕರಣದ (Murder case) ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌ (Supreme court) ಆದೇಶಿಸಿದೆ. ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸುಪ್ರೀ ಸೂಚಿಸಿದೆ.

ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವಂತೆ ಹಲವು ಸಂಘಟನೆಗಳು ಮತ್ತು ಸೌಜನ್ಯ ಕುಟುಂಬಸ್ಥರು ಹಲವು ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದರು.

ಸಿಬಿಐ ನಡೆಸಿದ್ದ ತನಿಖೆಯಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಯನ್ನು ಖುಲಾಸೆಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯ ತಾಯಿ ಕುಸುಮಾವತಿ ಗೌಡ ಹೈಕೋರ್ಟ್‌ ಮೊರೆಹೋಗಿದ್ದರು. ಆದರೆ ಹೈಕೋರ್ಟ್‌ ನಲ್ಲಿ ಅವರ ಅರ್ಜಿ ವಜಾಗೊಂಡಿತ್ತು. ಹೀಗಾಗಿ ಕುಸುಮಾವತಿ ಗೌಡ ಸುಪ್ರೀಂ ಕೋರ್ಟ್‌ ಗೆ ವಿಶೇಷ ಮನವಿ ಅರ್ಜಿ ಸಲ್ಲಿಸಿದ್ದರು.