ಕನಕಪುರ : ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯ ಯೋಧರೊಬ್ಬರು ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ತಡರಾತ್ರಿ ನಡೆದಿದೆ.
ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟ ಯೋಧ. ಇತ್ತೀಚೆಗಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಅವರು, ತಡರಾತ್ರಿ ತಮ್ಮ ಮಗನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದರು.
ಈ ವೇಳೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಚನ್ನವೀರೇಗೌಡ ಅವರು ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಮಾಹಿತಿ ತಿಳಿದು ಕನಕಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಘಟನೆ ಮಾಹಿತಿ ತಿಳಿದು ಕನಕಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.