ಬೆಳಗಾವಿ : ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಕೊನೆಗೂ ಬೆಳಗಾವಿಯ ನಾಲ್ಕು ತಾಲೂಕು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಎರಡನೇ ಪಟ್ಟಿಯಲ್ಲಿ ಕೈಬಿಟ್ಟ ತಾಲೂಕುಗಳನ್ನು ಈಗ ಸೇರ್ಪಡೆ ಮಾಡಲಾಗಿದೆ.
ರೈತರು ಹಾಗೂ ಶಾಸಕರ ಒತ್ತಡಕ್ಕೆ ಮಣಿದು ರಾಜ್ಯ ಸರಕಾರ ಘೋಷಣೆ ಮಾಡಿದೆ. ಹೊಸದಾಗಿ ಬೆಳಗಾವಿ ಜಿಲ್ಲೆಯ ರಾಮದುರ್ಗ, ಗೋಕಾಕ್, ಸವದತ್ತಿ ಹಾಗೂ ಕಾಗವಾಡ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಿ ಸರಕಾರ ಆದೇಶ ಹೊರಡಿಸಿದೆ.
ಸರಕಾರ ಹೊರಡಿಸಿದ ಎರಡನೇ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ರಾಯಬಾಗ, ಕಿತ್ತೂರು, ಮೂಡಲಗಿ, ನಿಪ್ಪಾಣಿ ಹಾಗೂ ಯರಗಟ್ಟಿ ಯನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು.





