ಹುಕ್ಕೇರಿ : ತಾಲೂಕಿನ ಬಡಕುಂದ್ರಿ ಗ್ರಾಮದ ಹೆಮ್ಮೆಯ ಪುತ್ರ, ರಾಜಸ್ಥಾನ ಗಂಗಾನಗರದ ಬಟಾಲಿಯನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ರಮೇಶ ಪರಗೌಡ ಪಾಟೀಲ (೪೫) ನಿಧನರಾಗಿದ್ದಾರೆ.
ಭಾರತೀಯ ಸೇನೆಯಲ್ಲಿ ೨೨ ವರ್ಷಗಳ ಕಾಲ ನಿಷ್ಠೆ ಮತ್ತು ಶಿಸ್ತಿನಿಂದ ದೇಶಸೇವೆ ಸಲ್ಲಿಸಿದ್ದ ರಮೇಶ ಅವರು ಗ್ರಾಮದ ಯುವಕರಿಗೆ ಸ್ಫೂರ್ತಿಯಾಗಿದ್ದರು. ಅವರ ಅಕಾಲಿಕ ಅಗಲಿಕೆ ಇಡೀ ಗ್ರಾಮವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಡಕುಂದ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ನೂರಾರು ಗ್ರಾಮಸ್ಥರು ಆಗಮಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ಶರೀರವು ನಾಳೆ ಬೆಳಿಗ್ಗೆ ಬಡಕುಂದ್ರಿ ಗ್ರಾಮಕ್ಕೆ ಅಗಮಿಸಲಿದ್ದು. ಮೃತರ ಅಂತ್ಯಸಂಸ್ಕಾರವು ನಾಳೆ ಮಧ್ಯಾಹ್ನ ೧ ಗಂಟೆಗೆ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ನಿಖಿಲ್ ಕತ್ತಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ಗ್ರಾಮ ಪಂಚಾಯಿತಿ, ಮಾಜಿ ಸೈನಿಕರ ಸಂಘ ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸಿವೆ.
Indian Army, Badakundri, Hukkeri,





