ಬೆಳಗಾವಿ : ರೈತ ನಾಯಕ ಶಶಿಕಾಂತ ಗುರೂಗಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕುಟುಂಬದ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಕ್ಕೆ ಇಂದು ಬಹಿರಂಗವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು. ಸಚಿವ ಪ್ರಹ್ಲಾದ ಜೋಶಿ ಅವರ ಕುಟುಂಬದವರಿಗೆ ನನ್ನ ಮಾತಿನಿಂದ ನೋವಾಗಿದ್ದರೆ ಬಹಿರಂಗವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ ಎಂದರು. ರೈತರಿಗೆ ಗೌರವ ಕೊಡದ ಉದ್ದೇಶಕ್ಕಾಗಿ ಆಕ್ರೋಶದಲ್ಲಿ ಆ ಮಾತು ಆಡಿದ್ದೇನೆ ಎಂದಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಹ್ಲಾದ ಜೋಶಿ. ಕಬ್ಬಿನ ಬೆಂಬಲ ಬೆಲೆ ವಿಚಾರವಾಗಿ ರೈತ ಮುಖಂಡರು ನನ್ನ ಬಳಿ ಬಂದಿದ್ದರು. ಈ ಕುರಿತು ಚರ್ಚೆ ಮಾಡೋಣ ಎಂದು ಹೇಳಿದ್ದೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ.




