ಬೆಳಗಾವಿ : ಪತ್ರಕರ್ತರೆಂದು ಹೇಳಿಕೊಂಡು ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ‌ಸೇರಿದಂತೆ ಜನಸಾಮಾನ್ಯರಿಗೆ ಕಿರುಕುಳ ನೀಡುವದಲ್ಲದೆ ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಕ್ಕೆ ಬೇಸತ್ತು ಹೋದ ಜನ ತಾವೇ ನಕಲಿ ಪತ್ರಕರ್ತರನ್ನು ಹಿಡಿದು ತರಾಟೆಗೆ ತಗೆದುಕೊಂಡ ಘಟನೆ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮಗಳ ಆಸ್ಪತ್ರೆ ಸೇರಿದಂತೆ ವಿವಿಧ ಕಡೆಗಳಿಗೆ ತೆರಳಿ ನಕಲಿ ವೈದ್ಯರು ಎಂದು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಪತ್ರಕರ್ತರನ್ನು ಸಾರ್ವಜನಿಕರು ತಡೆದು ಆಕ್ರೋಶ ಹೊರಹಾಕಿದ್ದಾರೆ. ಹಣ ಪಡೆದು ನೀವೇನು ಲೈಸನ್ಸ್ ಕೊಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ಪತ್ರಕರ್ತರ ಹೆಸರು ಹೇಳಿಕೊಂಡು ಸುಲಿಗೆ ಮಾಡುತ್ತಿರುವವರ ಸಂಖ್ಯೆ ಏರುತ್ತಿದೆ. ಇದರಿಂದ ಗ್ರಾಮೀಣ ಭಾಗದ ಮುಗ್ಧದು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಜನ ಆಕ್ರೋಶ ಹೊರಹಾಕಿದ್ದಾರೆ‌.