ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲಿ ಮೃತಪಟ್ಟು 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಐವರ ಸ್ಥಿತಿ ಚಿಂತಾಜನಕವಾದ ಘಟನೆ ಹುಕ್ಕೇರಿ ತಾಲೂಕಿನ ಹೊನ್ನಿಹಳ್ಳಿ ಗೇಟ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಹುಕ್ಕೇರಿ ತಾಲೂಕಿನ ಹೊನ್ನಿಹಳ್ಳಿಯ ಗ್ರಾಮದ ಗೇಟ್ ನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಈ ನಿಪ್ಪಾನಿ ಕಡೆಯಿಂದ ಸಂಕೇಶ್ಚರ ಕಡೆಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಹಾಗೂ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಬಸ್ ನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಹೆಚ್ಚಾಗಿ ಗಾಯಗೊಂಡಿದ್ದು, ಬಸ್ಸಿನಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸಂಕೇಶ್ಚರ ಸರಕಾರಿ ಆಸ್ಪತ್ರೆಗೆ ಹಾಗೂ ಬೆಳಗಾವಿ ಗೆ ಸ್ಥಳಾಂತರ ಮಾಡಲಾಗಿದೆ.