ಬೆಳಗಾವಿ : ಪ್ರತಿ ಟನ್ ಕಬ್ಬಿಗೆ 5 ಸಾವಿರ ದರ ನಿಗದಿ ಮಾಡಬೇಕು ಹಾಗೆಯೇ ರೈತರ ದಶಕಗಳ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಕೇಂದ್ರ ಸರಕಾರದ ಜೊತೆ ಮಹತ್ವದ ಸಭೆ ನಡೆಸಲು ರಾಜ್ಯ ರೈತ ಸಂಘದ ನಿಯೋಗ ದೆಹಲಿ ತಲುಪಿದೆ.
ರಾಜ್ಯ ರೈತ ಸಂಘಟನೆಯ ಸದಸ್ಯರು ವಿಮಾನದ ಮೂಲಕ ದೆಗಲಿಗೆ ತೆರಳಿದ್ದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಈ ವೇಳೆ ಎಫ್ ಆರ್ ಪಿ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆ ನಡೆಯಲಿವೆ.
ಅಷ್ಟೇ ಅಲ್ಲದೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಪ್ರಮುಖ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ. ಒಟ್ಟಿನಲ್ಲಿ ಕೇಂದ್ರದಲ್ಲಿ ನಡೆಯಲಿರುವ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.





