ಬೆಳಗಾವಿ : ರೈತರ ಪಾದಯಾತ್ರೆ ಕಿತ್ತೂರು ತಲುಪುವ ಮುನ್ನವೇ ಡಿ.ಕೆ.ಶಿವಕುಮಾರ ಅವರು ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ರೈತರ ಬೇಡಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಡಿ.ಕೆ.ಶಿವಕುಮಾರ ಅವರು ವಿಶೇಷ ವಿಮಾನದ ಮೂಲಕ ಶನಿವಾರ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು, ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇಂದೆ ರಾತ್ರಿ ವಾಪಸ್ ತೆರಳಲಿದ್ದಾರೆ. ಬೆಳಗಾವಿ ಪ್ರವಾಸದ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ.