ಬೈಲಹೊಂಗಲ : ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ, ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಎಚ್. ಕೌಜಲಗಿ ಶುಕ್ರವಾರ ಬೆಳಗ್ಗೆ ನಿಧನರಾದರು.
ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಜ್ಯದ ಅತ್ಯುತ್ತಮ ಪ್ರಶಸ್ತಿ, ಪುರಸ್ಕಾರಗಳು ದೊರೆತಿವೆ.ಅವರಿಗೆ ಪತ್ನಿ, ಶಾಸಕ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ, ಪುತ್ರಿ ಇದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ಮುಂಜಾನೆ 11 ಗಂಟೆಗೆ ಆನಿಗೋಳ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಕುಟುಂಬ ಸದಸ್ಯರು ತಿಳಿಸಿದ್ದಾರೆ.




