ಬೆಳಗಾವಿ : ಸಧ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸದಂತೆ ಬೆಳಗಾವಿ ಜಿಲ್ಲಾಧಿಕಾರಿ ಹೊರಡಿಸಿದ ನಿಷೇದಾಜ್ಞೆ ಮುಂದುರಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಇದಕ್ಕೆ ಜಗ್ಗದ ರೈತರು ನಮ್ಮನ್ನು ಸಾಮೂಹಿಕವಾಗಿ ಬಂಧನ ಮಾಡುವಂತೆ ಜಿಲ್ಲಾಡಳಿತಕ್ಕೆ ಸವಾಲು ಹಾಕಿ ಪಾದಯಾತ್ರೆ ಹಮ್ಮಿಕೊಂಡಿದ್ದು ಸಧ್ಯ ಪೊಲೀಸ್ ಇಲಾಖೆಗೆ ತಲೆನೋವಾಗಿದೆ.
ರೈತರ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ಇದೀಗ ಮತ್ತೊಂದು ಹಂತ ತಲುಪಿದೆ. ರೈತ ಸಂಘಟನೆಗಳ ಕರೆಯ ಮೇರೆಗೆ ಬೆಳಗಾವಿ ಜೈಲಿಗೆ ಭರೋ ಚಳುವಳಿಗೆ ಗುರ್ಲಾಪೂರದಿಂದ ಚಾಲನೆ ದೊರೆತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಗುರ್ಲಾಪೂರದಿಂದ ಬೆಳಗಾವಿ ಜೈಲಿನವರೆಗೆ ಸಾಗುತ್ತಿರುವ ಈ ಬೃಹತ್ ರೈತರ ಚಳುವಳಿಯಲ್ಲಿ ವಿವಿಧ ಗ್ರಾಮಗಳ ರೈತರು, ರೈತ ಮುಖಂಡರು ಹಾಗೂ ಹೋರಾಟಗಾರರು ಭಾಗವಹಿಸಿದ್ದಾರೆ. ಹಸಿರು ಶಾಲು ಧರಿಸಿ, ರೈತಪರ ಘೋಷಣೆಗಳನ್ನು ಕೂಗುತ್ತಾ ರೈತರು ಮುನ್ನಡೆಯುತ್ತಿರುವ ದೃಶ್ಯ ಕಂಡುಬಂದಿದೆ.




