ಬೆಳಗಾವಿ : ರೈತ ಹೋರಾಟದಲ್ಲಿ ಮುಂದಾಳತ್ವ ವಹಿಸಿ ಜೈಲ್ ಭರೋ ಚಳುವಳಿಗೆ ಕರೆ ಕೊಟ್ಟಿದ್ದ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜೈಲ್ ಭರೋ ಚಳುವಳಿಗೆ ತಡೆ ನೀಡಿ ಹೋರಾಟಗಾರರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಇದೇ ರೀತಿಯಲ್ಲಿ ಶಶಿಕಾಂತ ಗುರೂಜಿ ಅವರನ್ನು ಗೋಕಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ನಿನ್ನೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3,600 ಘೋಷಣೆ ಮಾಡಲಾಗಿತ್ತು. ಆದರೆ ರೈತರು ಇನ್ನೂ 50 ರೂ. ನೀಡುವಂತೆ ಬೇಡಿಕೆ ಇಟ್ಟು ಪ್ರತಿಭಟನೆಗೆ ಮುಂದಾಗಿದ್ದರು.




