ಕೊಪ್ಪಳ ; ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಏಳು ತಿಂಗಳ ಗರ್ಭಿಣಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ನಿವಾಸಿ ರೇಖಾ ವೀರೇಶಕುಮಾರ (33) ಎಂದು ಗುರುತಿಸಲಾಗಿದೆ.
2018ನೇ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ರೇಖಾ ಅವರು ಕಳೆದ ಒಂದೂವರೆ ವರ್ಷದಿಂದ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಏಳು ತಿಂಗಳ ಗರ್ಭಿಣಿಯಾಗಿದ್ದ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕರ್ತವ್ಯನಿಷ್ಠೆಯಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯುವ ಮಹಿಳಾ ಪೇದೆಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.




