ಮೂಡಲಗಿ : ಬುಧವಾರ ಮುಂಜಾನೆ ಮೂಡಲಗಿ –ಗುರ್ಲಾಪೂರ ರಸ್ತೆ ಮಾರ್ಗದಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಮುರಗೇಶ ಮಂಟೂರ (32) ಎಂದು ಗುರುತಿಸಲಾಗಿದೆ. ಇವರು ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ವಾರ್ಡ್ನಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಬುಧವಾರ ಮುಂಜಾನೆ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಕೊಕಟನೂರು ಗ್ರಾಮದಿಂದ ಮೂಡಲಗಿಗೆ ಬರುತ್ತಿದ್ದ ಸಂದರ್ಭದಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮುರಗೇಶ ಮಂಟೂರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ಮೃತರ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದಲ್ಲಿ ದುಃಖದ ಛಾಯೆ ಆವರಿಸಿದೆ.





