Select Page

Advertisement

ಕೊನೆಗೂ ಬಿಜೆಪಿ ತೆಕ್ಕೆಗೆ ದರೆಪ್ಪ ಟಕ್ಕಣ್ಣವರ ; ಅಥಣಿಯಲ್ಲಿ ಮುಂದುವರಿದ ಸಾಹುಕಾರ್ ರಣತಂತ್ರ

ಕೊನೆಗೂ ಬಿಜೆಪಿ ತೆಕ್ಕೆಗೆ ದರೆಪ್ಪ ಟಕ್ಕಣ್ಣವರ ; ಅಥಣಿಯಲ್ಲಿ ಮುಂದುವರಿದ ಸಾಹುಕಾರ್ ರಣತಂತ್ರ

ಅಥಣಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ರಣತಂತ್ರ ಹೆಣೆದಿದ್ದು ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಎದುರಾಗಿದೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ದರೆಪ್ಪ ಟಕ್ಕಣ್ಣವರ ಬಿಜೆಪಿ ಸೇರ್ಪಡೆಯಾದರು.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪಂಚಮಸಾಲಿ ಸಮುದಾಯದ ಮುಖಂಡ ದರೆಪ್ಪ ಟಕ್ಕಣ್ಣವರ ಬಿಜೆಪಿ ಸೇರ್ಪಡೆಯಾಗಿದ್ದು ಪಂಚಮಸಾಲಿ ಸಮುದಾಯದ ಮತ ಕಾಂಗ್ರೆಸ್ ಕೈ ತಪ್ಪುವ ಭೀತಿ ಎದುರಾಗಿದೆ.

ಸವದಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಂತೆ ಒಳಗೊಳಗೆ ಅಸಮಾಧಾನ ಹೊಂದಿದ್ದ ನಾಯಕರು ಸಧ್ಯ ಬಿಜೆಪಿ ಸೇರುತ್ತಿದ್ದಾರೆ. ಇದರಿಂದ ಲಕ್ಷ್ಮಣ ಸವದಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!