ಮತ ಎಣಿಕೆ ಕಾರ್ಯಕ್ಕೆ ಸಿದ್ಧತೆ : ಬೆಳಗಾವಿಯಲ್ಲಿ ಹೈ ಅಲರ್ಟ್
ಬೆಳಗಾವಿ : ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಏಣಿಕೆ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ, ಜಿಲ್ಲಾಧಿಕಾರಿಯೂ ಆಗಿರುವ ನಿತೇಶ ಪಾಟೀಲ ಹೇಳಿದರು.
ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ ೮ ಗಂಟೆಗೆ ಪೋಸ್ಟಲ್ ಬ್ಯಾಲೆಡ್ ಪೇಪರ್ ಕೌಟಿಂಗ್ ಮಾಡಲಾಗುವುದು. ೮.೩೦ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್ ನಲ್ಲಿ ೫೦೦ ಮತಗಳನ್ನು ಏಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಎಲ್ಲ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು.
ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು ೫ ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ ನೀಡಲಾಗಿದೆ. ೨೦೦ ಮೀಟರ್ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು ಎಂದರು.
ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮೇ.೧೩ ರಂದು ಚುನಾವಣೆಯ ಮತ ಏಣಿಕೆ ಸಂದರ್ಭದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ ಏರ್ಪಡಿಸಲಾಗಿದೆ.ಸ್ಟ್ರಾಂಗ್ ರೂಂ ಹೊರಗಡೆ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ. ೧೮ ವಿಧಾನಸಭಾ ಕ್ಷೇತ್ರದ ಜನರು ಬರುತ್ತಾರೆ. ಕೌಟಿಂಗ್ ಏಜೆಂಟ್, ಅಧಿಕಾರಿಗಳು ಸೇರಿದಂತೆ ಸುಮಾರು ೫ ಸಾವಿರ ಜನ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ನಗರ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ನಾಳೆ ಬೆಳಗ್ಗೆ ೫ ಗಂಟೆಯಿಂದ ಪೊಲೀಸ್ ಸಿಬ್ಬಂದಿಗಳು ಮತ ಏಣಿಕೆ ಸುತ್ತ ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಸುಮಾರು ೧,೫೦೦ ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಇದ್ದರು.


