Select Page

Advertisement

ಸವದಿಗೆ ಕೈ ತಪ್ಪಿದ ಮಂತ್ರಿ ಸ್ಥಾನ ; ಹೆಬ್ಬಾಳ್ಕರ್ ಗೆ ಸಿಹಿ

ಸವದಿಗೆ ಕೈ ತಪ್ಪಿದ ಮಂತ್ರಿ ಸ್ಥಾನ ; ಹೆಬ್ಬಾಳ್ಕರ್ ಗೆ ಸಿಹಿ

ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಸಚಿವ ಸಂಪುಟ ರಚನೆ ಕಸರತ್ತು ಮುಕ್ತಾಯವಾಗಿದ್ದು 24 ಜನ ಸಚಿವರು ನಾಳೆ ಪ್ರಮಾಣವಚನ ಪಡೆಯಲಿದ್ದಾರೆ‌. ಇನ್ನೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಸಚಿವಸ್ಥಾನ ಕೈತಪ್ಪಿದೆ.

ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಥಣಿಯಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದ ಇವರಿಗೆ ಮಂತ್ರಿ ಸ್ಥಾನ ಕೊಡುವ ಸಾಧ್ಯತೆ ಇತ್ತು ಎಂದು ಹೇಳಲಾಗುತ್ತಿತ್ತು.

ಆದರೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಲಕ್ಷ್ಮಣ ಸವದಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಉತ್ಸಾಹ ತೋರಿಲ್ಲ. ಜೊತೆಗೆ ಮುಂಬರುವ ದಿನಗಳಲ್ಲಿ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!