ಸ್ವಾಮೀಜಿ ಚಲಿಸುತ್ತಿದ್ದ ಕಾರು ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು
ಬೆಳಗಾವಿ : ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಭೀರಕ ಅಪಘಾತವಾಗಿದ್ದು ಇಬ್ಬರು ಸ್ಥಳದಲ್ಲೇ ಸಾವಣಪ್ಪಿದ್ದು ಸ್ವಾಮೀಜಿ ಪಾರಾಗಿದ್ದಾರೆ.

ಕಾಕತಿ ಗ್ರಾಮದ ಬಳಿ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಉಂಟಾದ ಬೀಕರ ರಸ್ತೆ ಅಪಘಾತದಲ್ಲಿ ಸ್ವಾಮೀಜಿ ಹಿಂಬಾಲಕರು ಸ್ಥಳದಲ್ಲೇ ಸಾವಣಪ್ಪಿದ್ದಾರೆ. ತೀವ್ರವಾಗಿ ಗಾಯೊಂಡ ಸ್ವಾಮೀಜಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.


