ಬೆಳಗಾವಿ : ವಿಕೃತ ಕಾಮಿ ಹಾಗೂ ಸರಣಿ ಹಂತಕ ಉಮೇಶ್ ರೆಡ್ಡಿಯನ್ನು ಬೆಳಗಾವಿ ಹಿಂಡಲಗಾ ಕಾರಾಗೃಹದಿಂದ ಬೆಂಗಳೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು 30 ವರ್ಷಗಳ ಶಿಕ್ಷೆಗೆ ಪರಿವರ್ತಿಸಿದ ನಂತರ ಸರಣಿ ಅತ್ಯಾಚಾರಿ ಮತ್ತು ಹಂತಕ ಉಮೇಶ್ ರೆಡ್ಡಿಯನ್ನು ಜೂನ್ 3 ರಂದು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.
2022 ರಲ್ಲಿ, ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ. 10 ವರ್ಷಗಳ ಕಾಲ ಕಾನೂನುಬಾಹಿರವಾಗಿ ಒಂಟಿಯಾಗಿ ಸೆರೆಮನೆಯಲ್ಲಿ ಇರಿಸಲಾಗಿದೆ ಎಂಬ ಕಾರಣಕ್ಕಾಗಿ ವಿಕೃತ ಕಾಮಿಯ ಮರಣದಂಡನೆಯನ್ನು ರದ್ದುಗೊಳಿಸಿತ್ತು.
2013 ರಲ್ಲಿ ರಾಷ್ಟ್ರಪತಿಗಳು ಆತನ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವವರೆಗೆ ಉಮೇಶ್ ರೆಡ್ಡಿಯನ್ನು 2016 ರವರೆಗೆ ಒಂಟಿಯಾಗಿ ಸೆರೆಮನೆಯಲ್ಲಿ ಇರಿಸಲಾಯಿತು.



