ಬೆಳಗಾವಿ : ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ನಾಲ್ಕು ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಸದಸ್ಯರ ಆಯ್ಕೆಯಾಗಿದೆ.
ಹಣಕಾಸು ಸ್ಥಾಯಿ ಸಮಿತಿ, ಲೋಕೋಪಯೋಗಿ ಸ್ಥಾಯಿ ಸಮಿತಿ, ಕಂದಾಯ ಇಲಾಖೆಯ ಸ್ಥಾಯಿ ಸಮಿತಿ ಹಾಗೂ ಆರೋಗ್ಯ ಇಲಾಖೆಯ ಸ್ಥಾಯಿ ಅಧ್ಯಕ್ಷ ಸ್ಥಾನದ ಚುನಾವಣೆ ಇಂದು ನಡೆದಿತ್ತು.