ಹೇಗಿದೆ ಯತ್ನಾಳ್ ಆರೋಗ್ಯ ; ಆಸ್ಪತ್ರೆಗೆ ಯಾರೆಲ್ಲಾ ಭೇಟಿ..?
ಬೆಂಗಳೂರು : ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಶಾಸಕರು ಹಾಗೂ ಮಾರ್ಷಲ್ ಗಳ ನಡುವಿನ ಜಟಾಪಟಿಯಲ್ಲಿ ಬಿದ್ದು ಅಸ್ವಸ್ಥತರಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸ್ಥಿರವಾಗಿದೆ.
ಘಟನೆ ನಂತರ ಯತ್ನಾಳ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ನಡುವೆ ಸಧ್ಯ ಯತ್ನಾಳ್ ಅವರ ಬಿಪಿ ಕಂಟ್ರೋಲ್ ನಲ್ಲಿದ್ದು ಚಿಕಿತ್ಸೆ ಕೊಡಲಾಗುತ್ತದೆ. ಇನ್ನೆರಡು ದಿನ ಅವರಿಗೆ ವಿಶ್ರಾಂತಿ ಅವಶ್ಯಕತೆ ಇದ್ದು ಗುರುವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆಸ್ಪತ್ರೆಗೆ ಸೇರಿಸುತ್ತಿದ್ದಂತೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ, ವಿಧಾನಸಭೆ ಅಧ್ಯಕ್ಷ ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


