Select Page

Advertisement

Video – ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ‌ ನೀರು ಪಾಲಾದ ಯುವಕ 

Video – ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ‌ ನೀರು ಪಾಲಾದ ಯುವಕ 

ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರ ಅರಶಿನಗುಂಡಿಯಲ್ಲಿ ನಡೆದಿದೆ. 

ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಶಿವಮೊಗ್ಗ ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದನು. ರಭಸವಾಗಿ ನೀರು ಧುಮ್ಮುಕ್ಕುತ್ತಿರುವ ಅಪಾಯದ ಸ್ಥಳದಲ್ಲಿ ಶರತ್ ನಿಂತಿದ್ದನು. 

ಈ ವೇಳೆ ಆಯತಪ್ಪಿ ಶರತ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿದ್ದು, ಶರತ್ ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲ್ಲರೂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!