BREAKING – ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎನ್ಇಪಿ ರದ್ದು : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮುಂಬರುವ ಶೈಕ್ಷಣಿಕ ವರ್ಷದಿಂದ ಕೇಂದ್ರ ಸರ್ಕಾರ ನಿಗದಿ ಮಾಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ( NEP ) ರದ್ದುಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ನಡೆದ ಕೆಪಿಸಿಸಿ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮೀತಿ ಅಧ್ಯಕ್ಷ ಅಧ್ಯಕ್ಷ ಕೆ. ರಹಮಾನ್ ಖಾನ್ ಎನ್ ಇ ಪಿ ಕೈಬಿಡುವಂತೆ ಆಗ್ಯಹಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ. ಮುಂಬರುವ ಶೈಕ್ಷಣಿಕ ವರ್ಷದಿಂದ ಎನ್ ಇ ಪಿ ಕೈಬಿಟ್ಟು ಸಂವಿಧಾನಕ್ಕೆ ಪೂರಕವಾದ ಶೈಕ್ಷಣಿಕ ನೀತಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.


