ಸಿಎಂ ಗೆ ಧನ್ಯವಾದ ತಿಳಿಸಿದ ಸಚಿವೆ ಹೆಬ್ಬಾಳ್ಕರ್
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಲು ಸಹಕಾರ ನೀಡಿದ್ದಲ್ಲದೆ, ಮೈಸೂರಿನಲ್ಲಿ ನಡೆಸ ಕಾರ್ಯಕ್ರಮ ಯಶಸ್ವಿಯಾದ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಮೈಸೂರಿನಲ್ಲಿ ಬುಧವಾರ ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭ ಯಶಸ್ವಿಯಾಗಲು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿದ್ದ ಸಚಿವೆ ಹೆಬ್ಬಾಳ್ಕರ್ ಕೊನೆಗೂ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.


