Select Page

Advertisement

ಬೆಳಗಾವಿ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ ; ಇನ್ಮುಂದೆ ಬೆಳಗಾವಿ To ಮೈಸೂರು ನೇರ ರೈಲು ಸಂಪರ್ಕ

ಬೆಳಗಾವಿ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ ; ಇನ್ಮುಂದೆ ಬೆಳಗಾವಿ To ಮೈಸೂರು ನೇರ ರೈಲು ಸಂಪರ್ಕ

ಬೆಳಗಾವಿ : ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ – ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ( Iranna Kadadi ) ಮಾಹಿತಿ‌ ನೀಡಿದ್ದಾರೆ.

ಈ‌ ಕುರಿತು ಮಾಹಿತಿ ನೀಡಿರುವ ಸಂಸದ ಈರಣ್ಣ ಕಡಾಡಿ. ರೈಲು ಸಂಖ್ಯೆ 17302 – ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ( Belagavi – Mysore Train )

ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ. ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ಪ್ರಾರಂಭಿಸಲು ಅನುಮತಿ ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ. ( Ashwin Prabhu )

Advertisement

Leave a reply

Your email address will not be published. Required fields are marked *

error: Content is protected !!