ಮಹಿಳಾ ಮೀಸಲಾತಿ ಮಸೂದೆ ಪಾಸ್ ; ಸಂಸದ ಶಶಿ ತರೂರ್ ಹರ್ಷ
ನವದೆಹಲಿ : ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪಾಸ್ ಆಗಿರುವ ಮಹಿಳಾ ಮೀಸಲಾತಿ ಮಸೂದೆಗೆ ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಶಶಿ ತರೂರ್ ( Shashi Tharoor ) ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಇವರು. ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗಿರುವುದಕ್ಕೆ ಸಂತೋಷವಾಗಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತರಲು ವಿಳಂಬ ನೀತಿ ಅನುಸರಿಸಬಹುದು ಎಂಬ ಮಾತನ್ನು ಇವರು ಹೇಳಿದ್ದಾರೆ.
ಕೇವಲ ಚುನಾವಣೆ ಕಾರಣದಿಂದ ಬಿಲ್ ಪಾಸ್ ಮಾಡಿರಬಹುದು. ಆದರೆ ಸಧ್ಯ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬಂದಿದ್ದು ಸಂತೋಷ ತರಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


