ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವ ಒಳಗೆ ಸಾಕಷ್ಟು ಬದಲಾವಣೆ ಕಂಡುಬರುತ್ತಿದೆ. ಸಿಎಂ ಸಿದ್ದರಾಮಯ್ಯ( Siddharamayya ) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ನಿಟ್ಟುಸಿರು ಬಿಟ್ಟಿತ್ತು.

ಈಗಾಗಲೇ ಕಾಂಗ್ರೆಸ್ ನಲ್ಲಿ ಮೂರು ಡಿಸಿಎಂ ಹುದ್ದೆಗೆ ಹೈಕಮಾಂಡ್ ಮೇಲೆ ಹೆಚ್ಚಿನ ಒತ್ತಡ ಇರುವುದು ಸತ್ಯ. ಸಚಿವ ರಾಜಣ್ಣ ಮಾತ್ರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಹಾಯವಾಗಬೇಕಾದರೆ ವಿವಿಧ ಸಮುದಾಯಕ್ಕೆ ಮೂರು ಡಿಸಿಎಂ ಅವಶ್ಯಕತೆ ಇದೆ ಎನ್ನುತ್ತಿದ್ದಾರೆ. DCM

ಒಂದುವೇಳೆ ಕಾಂಗ್ರೆಸ್ ಏನಾದರೂ ಇನ್ನೂ ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ದೇ ಆದರೆ ಒಂದು ವೀರಶೈವ ಲಿಂಗಾಯತ ಸಮುದಾಯದ, ಮತ್ತೊಂದು ಹಿಂದುಳಿದ ವರ್ಗ ಮತ್ತು ಎಸ್ಸಿ ಎಸ್ಟಿ ಸಮುದಾಯಕ್ಕೆ ಒಂದು ಹುದ್ದೆ ನೀಡುವ ಮೂಲಕ ಸಮುದಾಯಕ್ಕೆ ಬಲ ನೀಡಲೂಬಹುದು.

ಹಿಂದುಳಿದ ಸಮುದಾಯದ ಪ್ರಮುಖ ನಾಯಕರಾದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ದೊರೆಯುವುದರಲ್ಲಿ ಅನುಮಾನವಿಲ್ಲ. ಕಾರಣ ಹಿಂದುಳಿದ ವರ್ಗದ ಪ್ರಮುಖ ನಾಯಕರಾದ ಇವರಿಗೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕಲ್ಪಿಸಲಬಹುದು.

ಈಗಾಗಲೇ ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಹಿಂದುಳಿದ ವರ್ಗದ ಜನರ ಪರವಾಗಿ ಗಟ್ಟಿಯಾಗಿ ಕಾಂಗ್ರೆಸ್ ಇದೆ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಬಹುದು.

ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು‌ ನಾಲ್ಕು ತಿಂಗಳು ಕಳೆಯುವುದರ ಒಳಗೆ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಕೂಗು ಜೋರಾಗತೊಡಗಿದೆ. ಅಷ್ಟೇ ಅಲ್ಲದೆ ಸುಮಾರು ಶಾಸಕರು ಸರ್ಕಾರದ ವಿರುದ್ಧ ಆಕ್ರೋಶ ಹೊಂದಿದ್ದು ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯ ಮಾಡಲು ಅನುಧಾನ ಸಿಕ್ಕಿಲ್ಲ ಎಂಬ ನೋವು ಹಲವರಲ್ಲಿ ಇದೆ.

ಇನ್ನೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ ಅವರನ್ನು ಬಿಟ್ಟಿದ್ದಾರೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಬಣ ಡಿಸಿಎಂ ಅಸ್ತ್ರ ಪ್ರಯೋಗ ಮಾಡಿದೆ ಎಂದೂ ಹೇಳಲಾಗುತ್ತಿದೆ.