ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಫೇಸ್ಬುಕ್ ನಲ್ಲಿ ಪೋಸ್ಟ್ ; ಪ್ರಕರಣ ದಾಖಲು
ಧಾರವಾಡ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನಲೆಯಲ್ಲಿ ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ವಿನಯ್ ಕುಲಕರ್ಣಿ ಪೋಟೋ ಬಳಸಿಕೊಂಡು ಕೆಟ್ಟ ಭಾಷೆಯ ಪದ ಬಳಕೆ ಮಾಡಿದ್ದು, ಧಾರವಾಡದ ಮಿಲಂದ್ ಇಚ್ಚಂಗಿ ಅವರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.
ನಕಲಿ ಫೇಸ್ಬುಕ್ ಖಾತೆ ಸೃಷ್ಟಿ ಮಾಡಿದ್ದು ಶಾಸಕರ ವಿರುದ್ಧ ಅವಹೇಳನಕಾರಿ ಭಾಷೆ ಪ್ರಯೋಗಿಸಿ ಪೋಸ್ಟ್ ಮಾಡಲಾಗಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


