ಅಥಣಿ : ಕಲ್ಲಿನಿಂದ ಜಜ್ಜಿ ಯುವಕನ ಭೀಕರ ಕೊಲೆ
ಅಥಣಿ : ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಳು ಯಮಗಾರ(35) ಎಂಬ ವ್ಯಕ್ತಿ ಭೀಕರ ಕೊಲೆಯಾಗಿದ್ದಾನೆ. ಹಂತಕರು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ.
ಬೆಳಿಗ್ಗೆ ಸ್ಥಳೀಯರಿಂದ ಅಥಣಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ ತಲೆಗೆ ಜೋರಾಗಿ ಪೆಟ್ಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


