Select Page

Advertisement

SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ ವಿದ್ಯಾರ್ಥಿಗಳಿಗೆ ಮೂರು ಅವಕಾಶ

SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ ವಿದ್ಯಾರ್ಥಿಗಳಿಗೆ ಮೂರು ಅವಕಾಶ

ಬೆಂಗಳೂರು : ಎಸ್ ಎಸ್ ಎಲ್ ಸಿ ( SSLC ) ಹಾಗೂ ಪಿಯುಸಿ ( PUC ) ಯ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆ ತರಲು ಶಿಕ್ಷಣ ಇಲ್ಲಾಖೆ ಚಿಂತನೆ ನಡೆಸಿದ್ದು, ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಅವಕಾಶ ಕೊಡಲು ಸರ್ಕಾರ ನಿರ್ಧರಿಸಿದೆ‌‌.

ಹೌದು ಇದೇ ಶೈಕ್ಷಣಿಕ ವರ್ಷದಿಂದ ಹೊಸ ಪರೀಕ್ಷಾ ನೀತಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ವಾರ್ಷಿಕ ಹಾಗೂ ಪೂರಕ ಪರೀಕ್ಷೆ ಕೈಬಿಟ್ಟು ಹೊಸ ಪರೀಕ್ಷಾ ನೀತಿ ಜಾರಿಗೆ ಸರ್ಕಾರ ಸಿದ್ದತೆ ನಡೆಸಿದ್ದು ಈ ಕುರಿತು ಸಚಿವ ಮಧು ಬಂಗಾರಪ್ಪ ( Madhu Bangarappa ) ಮಹತ್ವದ ಹೇಳಿಕೆ ನೀಡಿದ್ದಾರೆ.

ಎಸ್ ಎಸ್ ಎಲ್ ಸಿ ಯಲ್ಲಿ ಈ ಹಿಂದೆ ಇದ್ದ ವಾರ್ಷಿಕ ಹಾಗೂ ಪೂರಕ ಪರೀಕ್ಷೆ ಕೈ ಬಿಟ್ಟು ಪರೀಕ್ಷೆ – ೦೧, ಪರೀಕ್ಷೆ – ೦೨, ಪರೀಕ್ಷೆ – ೦೩ ಮಾದರಿಯಲ್ಲಿ ಮೂರು ಬಾರಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಬರೆಯಲು ಇಲಾಖೆ ಅವಕಾಶ ಕಲ್ಪಿಸಲಿದೆ.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನಿಡಿದ್ದು. ಮಕ್ಕಳಿಗೆ ಪರೀಕ್ಷಾ ಒತ್ತಡ ಹೆಚ್ಚಾಗುತ್ತಿದ್ದು, ಇವರ ಹೊರೆ ಇಳಿಸಲು ಮುಂದಾಗಿದ್ದೇವೆ. ಜೊತೆಗೆ ತಂದೆ, ತಾಯಿಗಳಿಗೂ ಒತ್ತಡ ಹೆಚ್ಚಾಗುತ್ತಿದ್ದು ಇನ್ಮುಂದೆ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತರುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಅನುತ್ತಿರ್ಣ ಆದರೆ ವಿದ್ಯಾರ್ಥಿಗಳ ಒಂದು ವರ್ಷದ ಭವಿಷ್ಯ ಹಾಳಾಗುತ್ತದೆ. ಈ ಹಿನ್ನಲೆಯಲ್ಲಿ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಒಂದು ವಿಷಯದಲ್ಲಿ ಕಡಿಮೆ ಅಂಕ ಬಂದರೆ ವಾಪಸ್ ಪರೀಕ್ಷೆ ಎದುರಿಸಬಹುದಾಗಿದೆ.

ಇಲ್ಲವಾದರೆ ಕಡಿಮೆ ಅಂಕ‌ ಪಡೆದ ವಿಷಯಗಳನ್ನು ಮತ್ತೊಮ್ಮೆ ಪರೀಕ್ಷೆ ಬರೆದು ಮುಂದಿನ ವ್ಯಾಸಂಗ ಮಾಡಬಹುದು. ಮೂರು ಅವಕಾಶ ಬಳಸಿಕೊಂಡು ಹೆಚ್ಚಿನ ವ್ಯಾಸಂಗ ಮಾಡುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!