ಕರ್ನಾಟಕ ಬಂದ್ ; ಶಾಲಾ ಕಾಲೇಜುಗಳ ರಜೆ ಇರುತ್ತಾ…? ಇಲ್ಲಿದೆ ಮಾಹಿತಿ
ಬೆಂಗಳೂರು : ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯಾದ್ಯಂತ ಹೋರಾಟದ ಕಾವು ಜೋರಾಗಿದ್ದು ಎಲ್ಲೆಡೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಗುರುವಾರ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಕರೆ ಕೊಟ್ಟಿದ್ದು ನಾಳೆ ಭಾಗಶಃ ರಾಜ್ಯ ಸ್ತಬ್ಧ ಆಗಬಹುದು.
ಸಧ್ಯ ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳು ರಜೆ ಇರುತ್ತಾ..? ಇರಲ್ವಾ ಎಂಬ ಗೊಂದಲ ಪೋಷಕರು ಹಾಗೂ ಮಕ್ಕಳಲ್ಲಿ ಇದ್ದು ಸರ್ಕಾರ ಕೂಡಾ ಪರಿಸ್ಥಿತಿ ಅವಲೋಕನ ಮಾಡಿ ಒಂದು ನಿರ್ಧಾರಕ್ಕೆ ಬಂದಿದೆ.
ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ನಿರ್ಧಾರ ಪ್ರಕಟಿಸಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಯಾವ ರೂಪದಲ್ಲಿ ಬಂದ್ ಕಾವು ಇರುತ್ತದೆ ಎಂಬುದರ ಮೇಲೆ ಜಿಲ್ಲಾಧಿಕಾರಿ ನಿರ್ಧಾರ ತಗೆದುಕೊಳ್ಳುತ್ತಾರೆ ಎಂದು ಸಚಿವರು ಹೇಳಿದ್ದಾರೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಕುರಿತು ಸ್ಥಳೀಯ ಪರಿಸ್ಥಿತಿ ಅನುಗುಣವಾಗಿ ಜಿಲ್ಲಾಧಿಕಾರಿಗಳೇ ನಿರ್ಧಾರ ಪ್ರಕಟಿಸಲಿದ್ದಾರೆ.


