ಬುದ್ದಿ ಹೇಳಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ
ಚಿಕ್ಕಮಗಳೂರು : ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ ( 19 ) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಸುರಕ್ಷಾ ಗಣೇಶ ಹಬ್ಬಕ್ಕೆ ಮನೆಗೆ ಬಂದಿದ್ದಳು. ಅನೇಕ ವಿಷಯಗಳ ಕುರಿತು ಪೋಷಕರು ಯುವತಿಗೆ ಬುದ್ದಿವಾದ ಹೇಳಿದ್ದರು. ಇದೇ ಕಾರಣಕ್ಕಾಗಿ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.


