Select Page

Advertisement

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ – ಬಿರುಗಾಳಿ ಎಬ್ಬಿಸಿದ ಶಾಮನೂರು ಹೇಳಿಕೆ

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ – ಬಿರುಗಾಳಿ ಎಬ್ಬಿಸಿದ ಶಾಮನೂರು ಹೇಳಿಕೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಅಧಿಕಾರಿಗಳನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ( Shamanuru Shivashankarapp ) ಹೇಳಿಕೆ ಬಾರಿ ಸಂಚಲನ ಹುಟ್ಟುಹಾಕಿದೆ.

ಹೌದು ಕಳೆದ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದ ಬೆಂಬಲದಿಂದ 135 ಸ್ಥಾನ ಗೆಲ್ಲಲು ಸಹಕಾರಿಯಾಗಿತ್ತು. ನಂತರ ಸಮುದಾಯದ ಏಳು ಶಾಸಕರಿಗೆ ಸಚಿವಸ್ಥಾನ ನೀಡಲಾಗಿತ್ತು. ಆದರೆ ವೀರಶೈವ ಮಹಾಸಭಾ ( Verashaiva mahasaba ) ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೀಡಿರುವ ಆ ಒಂದು ಹೇಳಿಕೆ ಸಧ್ಯ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ಸಮುದಾಯದ ಅಧಿಕಾರಿಗಳಿಗೆ ತೊಂದರೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ಅನುಕೂಲತೆ ಕೊಡಲಾಗುತ್ತಿಲ್ಲ. ಇದರ ಬಗ್ಗೆ ನನಗೂ ನೋವಿದೆ‌. ಎಂದು ಬೆಂಗಳೂರಿನಲ್ಲಿ ನಡೆದ ವೀರಶೈವ ಮಹಾಸಭಾ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ. ನಮ್ಮ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯ ಆಗಿಲ್ಲ. ಈ ಕುರಿತು ಶಾಮನೂರು ಜೊತೆ ಮಾತನಾಡುವೆ ಎಂದು ಹೇಳಿದ್ದಾರೆ. ಆದರೆ ಲಿಂಗಾಯತ ಅಧಿಕಾರಿಗಳ ಮೇಲೆ ಅನ್ಯಾಯ ಕುರಿತು ಶಾಮನೂರು ಶಿವಶಂಕರಪ್ಪ ಹೇಳಿಕೆ ಸಧ್ಯ ಕಾಂಗ್ರೆಸ್ ವಲಯದಲ್ಲಿ ಕಾವು ಪಡೆದುಕೊಂಡಿದೆ.

Advertisement

Leave a reply

Your email address will not be published. Required fields are marked *

error: Content is protected !!