Select Page

Advertisement

13,352 ಶಿಕ್ಷಕರ ನೇಮಕಾತಿಗೆ ಅಸ್ತು

13,352 ಶಿಕ್ಷಕರ ನೇಮಕಾತಿಗೆ ಅಸ್ತು

ಬೆಂಗಳೂರು : 13,352 ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಹಿಂದೆ ಆಯ್ಕೆಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಪಡಿಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ತಾತ್ಕಾಲಿಕ ಆಯ್ಕೆಯಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಆ ಅಭ್ಯರ್ಥಿಗಳು ಕೆಎಸ್ಎಟಿ ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು ಎಂದು ಹೇಳಿದೆ‌.

2023 ರ ಜೂನ್ 8 ರಂದು ಸಿದ್ದಪಡಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಾರ 13,352 ಆಯ್ಕೆಯಾದ ಶಿಕ್ಷಕರ ನೇಮಕಾತಿ ಮಂದುವರಿಸಬಹುದು ಎಂದು ಕೋರ್ಟ ತಿಳಿಸಿದೆ. ರಾಜ್ಯ ಸರ್ಕಾರದ ಪರ ಹೆಚ್ಚುವರಿ‌ ಅಡ್ವೊಕೆಟ್ ಜನರಲ್ ವಿಕ್ರಮ್ ಹುಯುಲಗೋಳ ವಾದ ಮಂಡಿಸಿದ್ದಾರೆ.

ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು ಇದರಿಂದ ಏಳು ಮತ್ತು ಎಂಟನೇ ತರಗತಿ ಮಕ್ಕಳಿಗೆ ತೀವ್ರ ತೊಂದರೆ ಉಂಟಾಗುತ್ತದೆ. ಈ ಹಿನ್ನಲೆಯಲ್ಲಿ ಕೋರ್ಟ್ ಆದೇಶ ಮಹತ್ವ ಪಡೆದುಕೊಂಡಿದೆ‌.

Advertisement

Leave a reply

Your email address will not be published. Required fields are marked *

error: Content is protected !!