ಬೆಳಗಾವಿ- ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುಗ ಲೋಕಾಯುಕ್ತ ಅಧಿಕಾರಿಗಳು ನಿದ್ದೆಗಣ್ಣಿನಲ್ಲಿದ್ದ ಇಬ್ಬರು ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ.
ಬೆಳಗಾವಿಯ ಪಂಚಾಯತ್ ರಾಜ ಇಲಾಖೆ ಎಇಇ ಎಂ.ಎಸ್. ಬಿರಾದಾರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ.ರಘು ತಂಡದಿಂದ ದಾಳಿ ನಡೆಸಲಾಗಿದೆ.
ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂಟ್‌ನಲ್ಲಿ ಇರುವ ಮನೆ, ಕಿತ್ತೂರು, ಖಾನಾಪುರದಲ್ಲಿ ಇರುವ ನಿವಾಸದ ಮೇಲೂ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಇತ್ತ ಕಲಬುರಗಿ ಜಿಲ್ಲೆಯ ಟೌನ್ ಪ್ಲ್ಯಾನರ್ ಅಪ್ಪಾಸಾಹೇಬ್ ಕಾಂಬಳೆ ಮನೆ ಮೇಲೂ ದಾಳಿ ಮಾಡಲಾಗಿದೆ.
ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಇರೋ ಕಾರ್ಖಾನೆ ಮೇಲೆ ದಾಳಿ, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.


