Select Page

Advertisement

ಆರ್ ಅಶೋಕ್ ವಿಪಕ್ಷ ನಾಯಕನ ಪಟ್ಟ…? ; ಸಭೆಯಿಂದ ಹೊರನಡೆದ ಯತ್ನಾಳ್, ಜಾರಕಿಹೊಳಿ

ಆರ್ ಅಶೋಕ್ ವಿಪಕ್ಷ ನಾಯಕನ ಪಟ್ಟ…? ; ಸಭೆಯಿಂದ ಹೊರನಡೆದ ಯತ್ನಾಳ್, ಜಾರಕಿಹೊಳಿ

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ್ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಬಿಜೆಪಿ ಕೇಂದ್ರ ವೀಕ್ಷಕರ ತಂಡ ಈಗಾಗಲೇ ಬೆಂಗಳೂರಿಗೆ ಬಂದು ಸಭೆ ನಡೆಸಿದ್ದು, ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ಮುಂದುವರಿದಿದೆ.

ಸಧ್ಯ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಬಿಜೆಪಿಯಲ್ಲಿ ಗೊಂದಲ ಸೃಷ್ಡಿಯಾಗಿದ್ದು, ಆರ್ ಅಶೋಕ್ ಆಯ್ಕೆಗೆ ಬಹುತೇಕ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಅನೌಪಚಾರಿಕ ಸಭೆಯಲ್ಲಿ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗುತ್ತದೆ.

ಉತ್ತರ ಕರ್ನಾಟಕ ಭಾಗದ ಒಬ್ಬರಿಗೆ ವಿಪಕ್ಷ ನಾಯಕನ ಸ್ಥಾನ ನೀಡುವ ಕುರಿತು ಇಬ್ಬರು ನಾಯಕರು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಬಿಜೆಪಿ ಹೈಕಮಾಂಡ್ ಆಯ್ಕೆ ಬೇರೆ ಇರುವುದು ಸ್ಪಷ್ಟವಾಗುತ್ತಿದೆ.

Advertisement

Leave a reply

Your email address will not be published. Required fields are marked *

error: Content is protected !!