Select Page

Advertisement

ಯೂಥ್ ಪೌಂಡೇಶನ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

<em>ಯೂಥ್ ಪೌಂಡೇಶನ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ</em>

ಬೆಳಗಾವಿ:- ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಸಾಮಾಜಿಕ ಸಂಘಟನೆಯಾದ ಯೂಥ್ ಪೌಂಡೇಶನ್ ಹಾಗೂ ಸಾಂಗಲಿಯ ಸೇವಾ ಸದನ ಆಸ್ಪತ್ರೆಯ ಸಹಯೋಗದೊಂದಿಗೆ ಇದೇ ಡಿಸೆಂಬರ್ 2 ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ಗಣಪತಿ ಅವಳೇಕರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ ಆಸ್ಪತ್ರೆ ‌ಮತ್ತು ಮಾತ್ರೆಗಳಿಂದ ದೂರವಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಿಟ್ಟಿನಲ್ಲಿ ಬಡವರ್ಗದ ಜನರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಲಾಭ ಪಡೆಯಬೇಕಾಗಿ ವಿನಂತಿಸಿದ್ದಾರೆ.
ಈ ಕಾರ್ಯಕ್ರಮದ ಉದ್ಘಾಟಕರಾಗಿ ಕಾಗವಾಡ ಕ್ಷೇತ್ರದ ಶಾಸಕರಾದ ರಾಜು ಕಾಗೆ ಅವರು ಆಗಮಿಸಲಿದ್ದಾರೆ.
ಬೆಳಿಗ್ಗೆ 11ಗಂಟೆಗೆ ಗ್ರಾಮದ ಚಂದ್ರಗಿರಿ ದೇವಸ್ಥಾನದಲ್ಲಿ ಆರಂಭವಾಗುವ ಶಿಬಿರದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ತಪಾಸಣೆ,

ರಕ್ತದೊತ್ತಡ, ಇಸಿಜಿ, ನೇತ್ರ ತಪಾಸಣೆ ಸೇರಿದಂತೆ ಇನ್ನಿತರ ಆರೋಗ್ಯ ಸಂಬಂಧಿ ಕಾಯಿಲೆಗಳ ತಪಾಸಣೆ ನಡೆಯಲಿದೆ.
ಸಂಬರಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಎಲ್ಲ ಜನರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಸ್ವಸ್ಥ ಸಮಾಜ ನಿರ್ಮಿಸೋಣ ಎಂದು ಯೂಥ್ ಪೌಂಡೇಶನ್ ವತಿಯಿಂದ ಅವರು ಮನವಿ ಮಾಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!