Vantamuri – ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ; ಮತ್ತೆ ಮೂವರ ಬಂಧನ
ಬೆಳಗಾವಿ : ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಬಾಲಾಪರಾಧಿ ಸೇರಿದಂತೆ ಮತ್ತೇ ಮೂವರನ್ನು ಬಂಧಿಸಿದ್ದಾರೆ.
ಘಟನೆ ಬಳಿಕ 13 ಜನರ ವಿರುದ್ಧ ಕಾಕತಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ದಾಖಲಾಗಿತ್ತು. ಬಿಜೆಪಿ ರಾಷ್ಟ್ರೀಯ ಸತ್ಯಶೋಧನಾ ಸಮಿತಿ, ರಾಷ್ಟ್ರೀಯ ಮಹಿಳಾ ಆಯೋಗ ಭೇಟಿ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇನ್ನೂ ಇಬ್ಬರು ತಲೆ ಮರೆಸಿಕೊಂಡಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿದ ಬೆಳಗಾವಿ ಪೊಲೀಸರು ಆರೋಪಿಗಳಿಗಾಗಿ ವಿಶೇಷ ತಂಡ ರಚಿಸಿದ್ದಾರೆ.


