ಈಜಲು ಹೋದ ಒಂದೇ ಕುಟುಂಬದ ಐವರು ನೀರುಪಾಲು
ಕಾರವಾರ : ಈಜಲು ಹೋದ ಒಂದೇ ಕುಟುಂಬದ ಐವರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.
ನೀರು ಪಾಲಾದವರನ್ನು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಾದಿಯಾ ನೂರ್ (20), ನಬಿಲ್ ನೂರ್ ಅಹ್ಮದ್(22), ವಿದ್ಯಾರ್ಥಿಗಳಾದ ಉಮರ್ ಸಿದ್ದಿಕ್(14), ಮಿಸ್ಬಾ ತಬಸುಮ್(21) ಎಂದು ಗುರುತಿಸಲಾಗಿದೆ.
ಸದ್ಯ ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಉಳಿದವರಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ.


