Select Page

Advertisement

ಅಂತರ್ ವಿಶ್ವವಿದ್ಯಾಲಯ ಮಹಿಳಾ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ

ಅಂತರ್ ವಿಶ್ವವಿದ್ಯಾಲಯ ಮಹಿಳಾ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ

ಬೆಳಗಾವಿ :  ಬೆಳಗಾವಿಯು ಅಸ್ಸೊಸಿಯೆಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ನ ದಕ್ಷಿಣ ಭಾರತದ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜಿ. ಎಂ. ನಿಶ್ಚಿತಾ ಚಾಲನೆ ನೀಡಿದರು.

ಮಂಗಳವಾರ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಜ. 2 ರಿಂದ 5 ರವರೆಗೆ ಹಮ್ಮಿಕೊಂಡಿರುವ  ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ಬ್ಯಾಡ್ಮಿಂಟನ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು. ಕಳೆದ 10 ವರ್ಷಗಳಿಂದ ಭಾರತದಲ್ಲಿ ಕ್ರಿಕೆಟ್ ಹೊರತಾದ ಆಟಗಳಿಗೆ ಪ್ರೋತ್ಸಾಹ ದೊರೆಯುತ್ತಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೇರೆ, ಬೇರೆ ಕ್ರೀಡೆಗಳನ್ನು  ಪ್ರೋತ್ಸಾಹಿಸಲು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ.  ಸಧ್ಯದ ಪರಿಸ್ಥಿತಿಯಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುವುದೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಪದವಿ ಪಡೆದಷ್ಟು ಸಮನಾಗಿದೆ. ಕ್ರೀಡಾ ಸಾಧಕರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ.  ಆದ್ದರಿಂದ ನಿರ್ಭಿತರಾಗಿ ನಿಮ್ಮ ಆಸಕ್ತಿ ಅನುಸಾರ ಪರಿಶ್ರಮವನ್ನು ಕ್ರೀಡೆಗಳಲ್ಲಿ ಸಾಧನೆಮಾಡಿ ದೇಶದ ಗೌರವವನ್ನು ಹೆಚ್ಚಿಸಿರಿ ಎಂದು ತಿಳಿಸಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ ಎಸ್. ಕ್ರೀಡೆ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.  ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ, ಒಬ್ಬ ವಿದ್ಯಾರ್ಥಿಯು ತನ್ನ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಲು ಸಹಾಯಕವಾಗುವ ವಿವಿಧ ಕೌಶಲ್ಯಗಳು, ಅನುಭವ ಮತ್ತು ಆತ್ಮವಿಶ್ವಾಸವನ್ನು ಪಡೆಯುತ್ತಾನೆ. ಇದೇ ಉದ್ದೇಶದಿಂದ
ಕ್ರೀಡೆ ಹಾಗೂ ಯೋಗವನ್ನು ಕಲಿಕಾ ವಿಷಯವನ್ನಾಗಿ ಕಡ್ಡಾಯಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಲಸಚಿವರಾದ ಪ್ರೊ. ಬಿ. ಈ. ರಂಗಸ್ವಾಮಿ, ವಿಟಿಯು ಹಣಕಾಸು ಅಧಿಕಾರಿ ಎಮ್. ಎ. ಸಪ್ನ, ಅರ್ಜುನ ಪ್ರಶಸ್ತಿ ವಿಜೇತೆ ಜೇರಲಿನ್ ಅನಿಕಾ, ದೈಹಿಕ ಶಿಕ್ಷಣ ನಿರ್ದೇಶಕರಾದ ಪುಟ್ಟಸ್ವಾಮಿಗೌಡ,ಎನ್‌ ಎಸ್‌ ಎಸ್ ಸಂಯೋಜಕ ಪಿ.ವಿ. ಕಡಗದಕೈ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!