ವಿಜಯಪ್ರಕಾಶ್ ಹಾಡಿಗೆ ಮನಸೋತ ಯುವ ಸಮೂಹ
ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ( VTU – Belagavi ) ನಡೆದ ಯುಕ್ತಿ 2024 ರಾಷ್ಟ್ರಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ವಿಜಯ ಪ್ರಕಾಶ್ ಗಾಯನಕ್ಕೆ ಯುವಜನರು ಮನಸೋತರು.
ಶನಿವಾರ ಸಂಜೆ ವಿಟಿಯು ಆವರಣದಲ್ಲಿ ನಡೆದ ಯುಕ್ತಿ 2024 ( Yukti – 2k24 ) ರಾಷ್ಟ್ರಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದ ಸಮಾರೋಪ ಸಮಾರಂಭ ಹಾಗೂ ಖ್ಯಾತ ಗಾಯಕ ವಿಜಯ್ ಪ್ರಕಾಶ್ ( Vijay prakash ) ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಸಂಗೀತ ಸಂಜೆಯಲ್ಲಿ ವಿಟಿಯು ಕುಲಪತಿ ಪ್ರೊ ವಿದ್ಯಾಶಂಕರ ಎಸ್, ಕುಲಸಚಿವ ಪ್ರೊ ಬಿ ಈ ರಂಗಸ್ವಾಮಿ, ಮೌಲ್ಯ ಮಾಪನ ಕುಲಸಚಿವರಾದ ಪ್ರೊ. ಟಿ ಎನ್ ಶ್ರೀನಿವಾಸ, ವಿ ಟಿ ಯು ಕಾರ್ಯಕಾರಿ ಪರಿಷತ್ ಸದಸ್ಯ ಸನ್ನಿ ರಾಜ್, ಹಣಕಾಸು ಅಧಿಕಾರಿ ಶ್ರೀಮತಿ ಎಂ.ಎ ಸಪ್ನಾ ಹಾಗೂ ನಗರದ ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 6000 ಕ್ಕಿಂತ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳಗಾವಿ ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಸ್ನೇಹಾ ಪಿ.ವಿ ಹಾಗೂ ಗಾಯಕ ವಿಜಯ್ ಪ್ರಕಾಶ್ ಹೆಲ್ಮೆಟ್ ಹಾಕಿಕೊಳ್ಳುವ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸಿದರು. ಸಮಾರೋಪ ಸಮಾರಂಭದಲ್ಲಿ ಯುಕ್ತಿ – 2024 ರ ವಿಜೇತರಿ ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ ಎಸ್ ಬಹುಮಾನ ವಿತರಿಸಿದರು.


