ಕಾಂಗ್ರೆಸ್ ಗೆ ಕೈ ಕೊಟ್ಟ ಶಟ್ಟರ್ ; ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರುವ ಮೂಲಕ ಕಾಂಗ್ರೆಸ್ ಗೆ ನಿರಾಸೆ ಮೂಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಟಿಕೆಟ್ ನೀಡಿದ ಕಾರಣ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿ ಚುನಾವಣೆ ಸ್ಪರ್ಧಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿ ಪರಿಷತ್ ಸದಸ್ಯರಾಗಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶೆಟ್ಟರ್ ಮರಳಿ ಬಿಜೆಪಿ ಸೇರಿದ್ದಾರೆ.
ಇಂದು ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯ ಸ್ಥಾನ ಹಾಗೂ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಬಿಜೆಪಿ ಸೇರ್ಪಡೆ ಆಗಿದ್ದಾರೆ.


