Select Page

Advertisement

ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ – ಸಿಎಂ

ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ – ಸಿಎಂ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು.

ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024-25 ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆ ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳನ್ನು ಪರಿಶೀಲನೆಯನ್ನು ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈ ಅಧಿಕಾರಗಳ ಸಲಹೆ ಸೂಚನೆ, ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದರು.

Advertisement

Leave a reply

Your email address will not be published. Required fields are marked *

error: Content is protected !!