ಡಿಸಿಎಂ ಡಿಕೆಶಿ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ಕೊಪ್ಪಳ : ಅತ್ತ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಅವರ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಆಪ್ತ ವಿ.ಆರ್ ಪಾಟೀಲ್ ಎಂಬ ಮುಖಂಡನ ಮನೆಯ ಮೇಲೆಯೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗೋವಾ ಹಾಗೂ ಹುಬ್ಬಳ್ಳಿಯಿಂದ ಆಗಮಿಸಿರುವ 20ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉದ್ಯಮಿಯಾಗಿರುವ ವಿ.ಆರ್ ಪಾಟೀಲ್ ಒಡೆತನದ ಖಾಸಗಿ ಶಾಲೆಗೆ ಇತ್ತೀಚೆಗಷ್ಟೇ ಡಿಕೆಶಿ ಭೇಟಿ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಾರು ಅನುಮಾನಗಳಿಗೆ ದಾರಿ ಮಾಡಿ ಕೊಟ್ಟಿದೆ.


