Select Page

Advertisement

ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ; ಕಾರ್ಮಿಕನಿಗೆ ಗಂಭೀರ ಗಾಯ

ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ; ಕಾರ್ಮಿಕನಿಗೆ ಗಂಭೀರ ಗಾಯ

ಕಾಗವಾಡ : ಉಗಾರ ಖುರ್ದ ಪಟ್ಟಣದ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಡಘ ಸಂಭವಿಸಿದ್ದು, ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉಗಾರ ಶುಗರ್ಸ ಲಿಮಿಟೆಡ್ ಕಾರ್ಖಾನೆಯಲ್ಲಿ ಎಥೆನಾಲ್ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಪರ ರಾಜ್ಯಗಳ ಕಾರ್ಮಿಕರ ನೋವಿಗೆ ಕಾರ್ಖಾನೆ ನಿರ್ಲಕ್ಷ್ಯ ಕಾರಣ ಎಂದು ಹೇಳಲಾಗುತ್ತಿದೆ.

ಗಾಯಗೊಂಡ ಕಾರ್ಮಿಕರನ್ನು ಬೆಳಗಾವಿಯ ಕೆಎಲ್‌ಇ ಮತ್ತು ಮಿರಜ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!