ವಿಭಿನ್ನ ಪ್ರತಿಭಟನೆ ಮೂಲಕ ಗಮನಸೆಳೆದ ಬಿಜೆಪಿ ; ಜೈ ಶ್ರೀರಾಮ್ ಎಂದ ಮೃನಾಲ್ ಹೆಬ್ಬಾಳ್ಕರ್
ಬೆಳಗಾವಿ : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ದಿನಗಳಿಂದ ಈವರೆಗೆ ಜಾರಿಗೆ ತಂದ ಅಭಿವೃದ್ಧಿ ಕುರಿತು ಮತದಾರರಿಗೆ ತಿಳಿಸುವ ವಿನೂತನ ಪ್ರತಿಭಟನೆಯನ್ನು ಬಿಜೆಪಿ ಹಮ್ಮಿಕೊಂಡಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ತೆರಳಿದ ಬಿಜೆಪಿ ಮುಖಂಡರು ಮನವಿ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿತು.
ಶನಿವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಮನೆಗೆ ತೆರಳಿದ ಬಿಜೆಪಿ ಮುಖಂಡ ಧನಂಜಯ್ ಜಾಧವ್ ನೇತೃದ್ವದ ಕಾರ್ಯಕರ್ತರ ಮನವಿ ಪತ್ರ ಸಲ್ಲಿಸಿದ್ದರು. ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ ಇವರು, ಕಳೆದ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವೆಲ್ಲ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಂಡಿದ್ದೀರಿ ಎಂಬುದನ್ನು ಕ್ಷೇತ್ರದ ಮತದಾರರಿಗೆ ತಿಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಧನಂಜಯ್ ಜಾಧವ್. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಜನಸಾಮಾನ್ಯರು ಮೂಲಭೂತ ಸೌಕರ್ಯಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ ಕುರಿತು ಕ್ಷೇತ್ರದ ಮತದಾರಿಗೆ ಮಾಹಿತಿ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮೃನಾಲ್ ಹೆಬ್ಬಾಳ್ಕರ್. ಕಳೆದ ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಕ್ಷೇತ್ರದ ಜನರಿಗೆ ನಮ್ಮ ಕೆಲಸದ ಬಗ್ಗೆ ಸಂತೃಪ್ತಿ ಇದೆ ಎಂದರು.
ಈ ಸಂದರ್ಭದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದ ಬಿಜೆಪಿ ಸದಸ್ಯರಿಗೆ ಜೈ ಶ್ರೀ ರಾಮ್ ಹೇಳುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಸೌಹಾರ್ದವಾಗಿ ಮಾತನಾಡಿ ಕಳುಹಿಸಿದರು.
***********
ಇದೇ ರೀತಿಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಅವರಿಗೂ ಬಿಜೆಪಿ ನಾಯಕರು ಮನವಿಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಗೀತಾ ಸುತಾರ್, ಮುಖಂಡರಾದ ಈರಯ್ಯ ಖೋತ್, ವಿಜಯ್ ಕೊಡಗಾನೂರ, ರವಿ ಪಾಟೀಲ್, ಮಹಾಂತೇಶ್ ವಕ್ಕುಂದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


