ಅಥಣಿ – ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಸಿಲುಕಿ ವಿದ್ಯಾರ್ಥಿ ಸಾವು
ಅಥಣಿ : ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ಕಬ್ಬು ತುಂಬಿದ ಟ್ಯಾಕ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಅದೇ ಗ್ರಾಮದ ವಿದ್ಯಾರ್ಥಿಯೊಬ್ಬ ಆಯುತಪ್ಪಿ ಕೆಳಕ್ಕೆ ಬಿದ್ದ ಪರಿಣಾಮ ಟ್ರಾಕ್ಟರ್ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ಜರುಗಿದೆ.
ಮೃತಪಟ್ಟ ವಿದ್ಯಾರ್ಥಿ ಅಥಣಿ ಪಟ್ಟಣದ ಖಾಸಗಿ ಶಾಲೆ ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮರ್ಥ ಪರಶುರಾಮ ಕಾಗವಾಡ (15) ಎಂದು ಗುರುತಿಸಲಾಗಿದೆ. ಈ ಬಗ್ಗೆ ಐಗಳಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


