ಸುರಪುರ ಶಾಸಕರ ನಿಧನದ ಸುದ್ದಿ ತಿಳಿದು ಹೃದಯಾಘಾತದಿಂದ ಅಭಿಮಾನಿ ಸಾವು
ಯಾದಗಿರಿ: ಸುರಪುರ ( Surapura ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಜಾ ವೆಂಕಟಪ್ಪ ನಾಯಕ ( Raja Venkatappa Nayaka ) ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದರು. ಇಂತಹ ಅವರ ಸಾವಿನ ಸುದ್ದಿಯನ್ನು ಕೇಳಿದಂತ ಅವರ ಅಭಿಮಾನಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದದಿದೆ.
ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಕೇಳಿದಂತ ಅವರ ಮಂಗಳೂರು ಗ್ರಾಮದ ಅಭಿಮಾನ ಹನುಮಂತ ಹವಾಲ್ದಾರ್(65) ಎಂಬುವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. Congress
ಮೃತ ಹನುಮಂತ ಹವಾಲ್ದಾರ್ ಅವರು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಇಂತಹ ಅವರು ಹೃದಯಾಘಾತದಿಂದ ಸಾವನ್ನಪ್ಪಿರೋ ಸುದ್ದಿ ಕೇಳಿ, ತಾವು ಕೂಡ ಹೃದಯಾಘಾತಕ್ಕೆ ಒಳಗಾಗಿ ಇಂದು ಸಾವನ್ನಪ್ಪಿದ್ದಾರೆ.
Congress DKC Siddaramaya Surapura RajavenkatappaNayak


